Story/Poem

ಕೆ. ಷರೀಫಾ

ಲೇಖಕಿ ಕೆ.ಷರೀಫಾ ಅವರು 1957 ಮೇ 05ರಂದು ಗುಲಬರ್ಗಾದಲ್ಲಿ ಜನಿಸಿದರು. ತಂದೆ ಬಾಬುಮಿಯಾ, ತಾಯಿ ಪುತಲೀಬೇಗಂ. ಬಿಡುಗಡೆಯ ಕವಿತೆಗಳು, ನೂರೇನ್‌ಳ ಅಂತರಂಗ, ಪಾಂಚಾಲಿ, ಮುಮ್ರಾಜಳ ಮಹಲು, ಬುರ್ಖಾ ಪ್ಯಾರಡೈಸ್, ಸಂವೇದನೆ (ವಿಮರ್ಶೆ), ಮಹಿಳಾ ಮಾರ್ಗ (ಸಹ ಸಂಪಾದನೆ), ಆಧುನಿಕ ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಮಹಿಳಾ ಸಂವೇದನೆ (ಸಂಶೋಧನೆ), ಹೊಸ ಶತಮಾನದ ಕಾವ್ಯ (ಸಂಪಾದನೆ) ಅವರ ಪ್ರಕಟಿತ ಕೃತಿಗಳು. ಅವರಿಗೆ ಮಹಿಳೆ ಮತ್ತು ಸಮಾಜ ಪ್ರಶಸ್ತಿ, ವನಿತಾ ಸಾಹಿತ್ಯ ಶ್ರೀ ಪ್ರಶಸ್ತಿ, ಅತ್ತಿಮಬ್ಬೆ ಸಾಹಿತ್ಯ ಶ್ರೀ ಪ್ರಶಸ್ತಿ, 2019ನೇ ಸಾಲಿನ ಕ.ಸಾ.ಪದ ಶ್ರೀನಿವಾಸ ಸ್ಮರಣಾರ್ಥ ಪಿ.ಕೆ. ನಾರಾಯಣ ದತ್ತಿ ಪ್ರಶಸ್ತಿ ದೊರೆತಿದೆ. 

More About Author

Story/Poem

ತಲ್ಲಾಕಿನ ಕತ್ತಿಗಳು

ಅದು ಕೋಟೆಯಂತೆ ಕಟ್ಟಿದ ಗೋಡೆ ದಪ್ಪ ದಪ್ಪ ಕಪ್ಪು ಕಲ್ಲಿನ ಕೋಟೆ ಗೋಡೆಯಾಚೆ ಸ್ವಚ್ಚಂದ ಪಾರಿವಾಳಗಳು ಗೋಡೆಗಳ ಮಧ್ಯೆ ನಾನು ಸಮಾಧಿ ಬದುಕು ಕಬ್ಬಿಣದ ಕಠಿಣ ಹಾದಿ ಹಿಮಾಲಯದ ಹಿಮನೀರು ನಾನಾದರೆ ಬಿಸಿನೀರ ಬುಗ್ಗೆಯಂತೆ ಕುದಿವ ನೀರವನು ಕಿಲುಬುಗಟ್ಟಿದ ಸಂದುಗೊಂದುಗಳಲ್ಲಿ ನನಗಿಲ್ಲ ರಕ್ಷ...

Read More...