ಬುಕ್‌ ಬ್ರಹ್ಮ ಕಥಾ ಸ್ಪರ್ಧೆ

ಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ: ಪ್ರಥಮ ಬಹುಮಾನ ರೂ.50,000


ಭಾರತದ 75ನೇ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ಮೂರನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ’ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2022’ನ್ನು ಏರ್ಪಡಿಸಲಾಗಿದೆ.

ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯಲಿರುವ ಕಥೆಗೆ ರೂ.50,000; ದ್ವೀತಿಯ ಸ್ಥಾನಕ್ಕೆ 25,000, ತೃತೀಯ ಸ್ಥಾನಕ್ಕೆ ರೂ. 15,000 ಮತ್ತು ಉಳಿದಂತೆ ಮೂರು ಕತೆಗಳಿಗೆ ತಲಾ ರೂ.5000 ಸಮಾಧಾನಕರ ಬಹುಮಾನ ನೀಡಲಾಗುವುದು.

ಕನ್ನಡದ ಸಮೃದ್ಧ ಕಥಾ ಪರಂಪರೆ ಇನ್ನೂ ಹೆಚ್ಚು ಶ್ರೀಮಂತವಾಗಲಿ, ಮತ್ತಷ್ಟು ಮೌಲ್ಯಯುತವಾದ ಕಥೆಗಳು ಹೊರಹೊಮ್ಮಲಿ ಎನ್ನುವುದೇ ’ಬುಕ್ ಬ್ರಹ್ಮ- ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ’ಯ ಮೂಲ ಉದ್ದೇಶ.

ಕನ್ನಡ ಕಥಾ ಪ್ರಪಂಚದಲ್ಲಿ ಹಲವು ಮಹತ್ವದ ವಾರ್ಷಿಕ ಸ್ಪರ್ಧೆಗಳು ಈಗಾಗಲೇ ಚಾಲ್ತಿಯಲ್ಲಿವೆ. ಆ ಝುಳು ಝುಳು ಹರಿವ ನದಿಗೆ ಹೊಸದಾಗಿ ಈಗ ’ಬುಕ್ ಬ್ರಹ್ಮ’ ತೊರೆ ಸೇರಲಿದೆ. ಪ್ರತಿ ವರ್ಷ ದೇಶದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಈ ಸ್ಪರ್ಧೆಯನ್ನು ಸಂಸ್ಥೆಯು ನಡೆಸಲಿದೆ.

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ.
 • 1. ಕತೆಯು ಸ್ವತಂತ್ರವಾಗಿರಬೇಕು. ಅನುವಾದ, ಅನುಕರಣವಾಗಿರಬಾರದು.
 • 2. ಕತೆಯು ಅಪ್ರಕಟಿತವಾಗಿರಬೇಕು. ಮುದ್ರಣ ಅಥವಾ ಯಾವುದೇ ವಿದ್ಯುನ್ಮಾನ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರಬಾರದು.
 • 3. ಕತೆಯು 5000 ಪದಗಳಿಗೆ ಮೀರದಂತಿರಬೇಕು.
 • 4. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ವಯಸ್ಸಿನ ನಿರ್ಬಂಧ ಇಲ್ಲ.
 • 5. ಹಸ್ತಪ್ರತಿ ಅಥವಾ ಟೈಪ್ ಮಾಡಿದ ಕತೆಯಿರುವ ಪುಟಗಳಲ್ಲಿ ತಮ್ಮ ಹೆಸರನ್ನು ದಾಖಲಿಸಬಾರದು. ಕತೆ ಮುಗಿದ ನಂತರ ಪ್ರತ್ಯೇಕ ಪುಟದಲ್ಲಿ ತಮ್ಮ ಹೆಸರು, ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಇರಬೇಕು.
 • 6. ಕತೆಗಾರರು ನಿಬಂಧನೆಗಳಿಗೆ ಒಪ್ಪಿದ ಮತ್ತು ಸಹಿ ಮಾಡಿದ ಪ್ರತ್ಯೇಕ ಒಂದು ಪತ್ರ ಇಡಬೇಕು.
 • 7. ಬುಕ್‌ಬ್ರಹ್ಮ ಪ್ರೈವೇಟ್ ಲಿಮಿಟೆಡ್ (Book Brahma Private Limited), ಫರ್ಬೆಂಡನ್‌ ಪ್ರೈವೇಟ್ ಲಿಮಿಟೆಡ್ (Verbinden Private Limited) ಮತ್ತು ಕಾಗ್ನಿಕ್ವೆಸ್ಟ್‌ ಪ್ರೈವೇಟ್ ಲಿಮಿಟೆಡ್ (Cogniquest Private Limited) ಸಂಸ್ಥೆಯ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.
 • 8. ಕನ್ನಡದ ಪ್ರಮುಖ ಕತೆಗಾರರು/ವಿಮರ್ಶಕರು ಸ್ಪರ್ಧೆಯ ನಿರ್ಣಾಯಕರಾಗಿರುತ್ತಾರೆ.
 • 9. ಆಯ್ಕೆಗೆ ಸಂಬಂಧಿಸಿದಂತೆ ’ಬುಕ್ ಬ್ರಹ್ಮ’ ಆಡಳಿತ ಮಂಡಳಿಯ ನಿರ್ಣಯವೇ ಅಂತಿಮ.
 • 10. ಕತೆಗಳನ್ನು ಕಳುಹಿಸಲು ಕೊನೆಯ ದಿನ ಬುಧವಾರ, ಜೂನ್‌ 15, 2022.
 • 11. ಶುಕ್ರವಾರ, ಆಗಸ್ಟ್‌ 5, 2022 ರಂದು ಅಂತಿಮ ಸುತ್ತನ್ನು ಪ್ರವೇಶಿಸುವ 20 ಕಥೆಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
 • 12. ಸೋಮವಾರ, ಆಗಸ್ಟ್ 15, 2022 ರಂದು ನಡೆಯಲಿರುವ ಸಮಾರಂಭದಲ್ಲಿ ಅಂತಿಮ ಸುತ್ತಿನ ನಂತರ ಪ್ರಶಸ್ತಿಗಳಿಗೆ ಅರ್ಹವಾದ ಕತೆಗಳ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಎರಡನ್ನೂ ಮಾಡಲಾಗುವುದು.
 • 13. ಅಂತಿಮ ಸುತ್ತಿಗೆ ಆಯ್ಕೆಯಾದ 20 ಕತೆಗಳನ್ನು ’ಬುಕ್ ಬ್ರಹ್ಮ’ ವೆಬ್‌ಸೈಟ್‌ ನಲ್ಲಿ ಹಾಗೂ ಪುಸ್ತಕ, ಇ-ಪುಸ್ತಕ, ಆಡಿಯೋ ಪುಸ್ತಕದ ರೂಪದಲ್ಲಿ ಪ್ರಕಟಿಸಲಾಗುತ್ತದೆ. ಈ 20 ಕತೆಗಳ ಪೈಕಿ ಬಹುಮಾನ ಪಡೆಯದೇ ಉಳಿಯುವ 14 ಕತೆಗಳಿಗೆ ತಲಾ ರೂ.1000 ಗೌರವ ಧನ ನೀಡಲಾಗುವುದು. ಈ ಎಲ್ಲಾ 20 ಕತೆಗಳ ಹಕ್ಕುಸ್ವಾಮ್ಯ ಕತೆಗಾರರು ಮತ್ತು ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಇಬ್ಬರಿಗೂ ಜಂಟಿಯಾಗಿ (ಶೇಕಡಾ 50) ಸೇರಿರುತ್ತದೆ.
 • 14. ಒಬ್ಬರು ಒಂದು ಕತೆಯನ್ನು ಮಾತ್ರ ಕಳಿಸಬೇಕು.
 • 15. ಕತೆಗಳನ್ನು ಈ-ಮೇಲ್ ಮೂಲಕ (ನುಡಿ / ಯೂನಿಕೋಡ್ ಫಾಂಟ್ ಬಳಸಿ ಟೈಪ್ ಮಾಡಿದ ಪ್ರತಿ) BBKathaSpardhe2022@bookbrahma.com ಅಥವಾ ಹಸ್ತಪ್ರತಿಯನ್ನು,
  ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ ಕನ್ನಡ
  ಮೂರನೇ ಮಹಡಿ, ಆರ್ ಕೆ ಕಾಂಪ್ಲೆಕ್ಸ್
  ಕೆಎಸ್ಎಸ್ಐಡಿಸಿ ಕಾಂಪೌಂಡ್,
  ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ,
  ಬೆಂಗಳೂರು-560100 ಕ್ಕೆ ಕಳುಹಿಸಿಕೊಡಬಹುದು.
 • 16. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 78926 08118